Home » Website » News from jrlobo's Office » ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ
ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ
Image from post regarding ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ

ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ

ಮಂಗಳೂರು ಮಹಾನಗರದ ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭವಿಷ್ಯದಲ್ಲಿ ಶಕ್ತಿನಗರ ಪ್ರದೇಶ ಸಾಟ್ ಲೈಟ್ ನಗರವಾಗಿ ಪರಿವರ್ತನೆಗೊಳ್ಳುವ ನಿಟ್ಟಿನಲ್ಲಿ ಇಲ್ಲಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸುವ ಇರಾದೆಯಲ್ಲಿದ್ದೇವೆ. ಶಾಲೆ, ಕಾಲೇಜುಗಳು, ದೊಡ್ಡ ಕಟ್ಟಡಗಳು ಈ ಪ್ರದೇಶದಲ್ಲಿದ್ದು, ಇಲ್ಲಿನ ಹೆಚ್ಚಿನ ರಸ್ತೆಗಳನ್ನು ಕಾಂಕ್ರಿಟೀಕರಣಗೊಳಿಸಲಾಗಿದೆ. ಭಾಕಿ ಉಳಿದ ರಸ್ತೆಗಳಿಗೆ ಕಾಂಕ್ರಿಟೀಕರಣಗೊಳಿಸುವ ನಿಟ್ಟಿನಲ್ಲಿ ಇಂದು ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ್ದೇವೆ. ಸುಮಾರು 500 ಮೀಟರ್ ಉದ್ದ ಹಾಗೂ 7 ಮೀಟರ್ ಅಗಲದಲ್ಲಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುವುದು. ಈಗಾಗಲೇ ಸರಕಾರದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಲೋಕೊಪಯೋಗಿ ಇಲಾಖೆಯ ಸಚಿವರಾದ ಶ್ರೀ.ಡಾ|| ಮಹಾದೇವಪ್ಪರವರಿಗೆ ಮಂಗಳೂರಿನ ರಸ್ತೆಗಳ ಅಭಿವೃದ್ಧಿಗೆ ಮನವಿ ಸಲ್ಲಿಸಿದಾಗ ಅದಕ್ಕೆ ಸ್ಪಂದಿಸಿ ರೂ.10 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿ ಅದರಲ್ಲಿ ಈ ಕಾಮಗಾರಿಯನ್ನು ತೆಗೆದುಕೊಂಡಿದ್ದೇವೆ ಎಂದರು. ಈ ಸಂದರ್ಭದಲ್ಲಿ ಮೇಯರ್ ಶ್ರೀ ಭಾಸ್ಕರ್ ಕೆ, ಕಾರ್ಪೋರೇಟರ್ ಅಖಿಲಾ ಆಳ್ವ, ಅಧಿಕಾರಿಗಳಾದ ರವಿಕುಮಾರ್, ನರೇಶ್ ಶೆಣೈ, ರಿಚಾರ್ಡ್ ಡಿಸೋಜ, ಉಧ್ಯಮಿ ಕೆ.ಸಿ.ನಾಯ್ಕ್, ಕಾಂಗ್ರೆಸ್ ಮುಖಂಡರುಗಳಾದ ಉಮೇಶ್ ದಂಡೆಕೇರಿ, ಯಶವಂತ, ರವೀಂದ್ರ ನಾಯಕ್, ಬ್ಯಾಪ್ಟಿಸ್ಟ್ ಡಿಸೋಜ, ಜಯಲಕ್ಷ್ಮೀ ಉಪಸ್ಥಿತರಿದ್ದರು.