Home » Website » News from jrlobo's Office » 23.04.2018 ರಂದು ಶ್ರೀ.ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ.
JRLobo
Photography of JRLobo in office

23.04.2018 ರಂದು ಶ್ರೀ.ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸೋಮವಾರ ತಾ.23.04.2018 ರಂದು ಬೆಳಿಗ್ಗೆ 11.00 ಗಂಟೆಗೆ ಮಂಗಳೂರು ಮಹಾನಗರಪಾಲಿಕೆ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಇದಕ್ಕೂ ಮೊದಲು ಬೆಳಿಗ್ಗೆ 10 ಗಂಟೆಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಬಳಿಯಿಂದ ಮೆರವಣಿಗೆ ಮೂಲಕ ಮಂಗಳೂರು ಮಹಾನಗರ ಪಾಲಿಕೆ ಕಛೇರಿಗೆ ಬರಲಾಗುವುದು. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಲಾಗಿದೆ.