Home » Website » News from jrlobo's Office » ಕೊಳಚೆ ನಿರ್ಮೂಲನೆ ಮಂಡಳಿಯ ಅನುದಾನದಿಂದ ನೀತಿನಗರದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ
ಕೊಳಚೆ ನಿರ್ಮೂಲನೆ ಮಂಡಳಿಯ ಅನುದಾನದಿಂದ ನೀತಿನಗರದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ
Image from post regarding ಕೊಳಚೆ ನಿರ್ಮೂಲನೆ ಮಂಡಳಿಯ ಅನುದಾನದಿಂದ ನೀತಿನಗರದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ

ಕೊಳಚೆ ನಿರ್ಮೂಲನೆ ಮಂಡಳಿಯ ಅನುದಾನದಿಂದ ನೀತಿನಗರದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ

ಕರ್ನಾಟಕ ಕೊಳಚೆ ನಿರ್ಮೂಲನೆ ಮಂಡಳಿಯ ಅನುದಾನದಲ್ಲಿ ಮಂಗಳೂರು ಶಕ್ತಿನಗರದ ಬಳಿಯಿರುವ ನೀತಿನಗರದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್ ಲೋಬೊರವರು ಇಂದು 31.01.2018ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಸುಮಾರು ರೂ.40 ಲಕ್ಷದ ವೆಚ್ಚದಲ್ಲಿ ಈ ಪ್ರದೇಶದ ರಸ್ತೆ, ತೋಡು ಹಾಗೂ ತಡೆಗೋಡೆಯನ್ನು ನಿರ್ಮಿಸಲಾಗುವುದು. ಈ ಹಿಂದೆಯೇ ಕೂಡ ಮಂಡಳಿಯ ನೆರವಿನಿಂದ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಈ ಎಲ್ಲಾ ಕಾಮಗಾರಿಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಬಹಳಷ್ಟು ಪ್ರಯೋಜನವಾಗಲಿದೆ ಎಂದರು. ಈ ಸಂದರ್ಭದಲ್ಲಿ ಕಾರ್ಪೊರೇಟರ್ ಜುಬೈದಾ, ಮಾಜಿ ಮೇಯರ್ ಅಬ್ದುಲ್ ಅಜೀಜ್, ವಾರ್ಡ್ ಅಧ್ಯಕ್ಷ ಕುಮಾರ್, ಆಲ್ವಿನ್ ಪಾಯಿಸ್ ಉಪಸ್ಥಿತರಿದ್ದರು.