Home » Website » News from jrlobo's Office » ಡಿ.17 ರಂದು ಶಕ್ತಿನಗರ ನಾಲ್ಯಪದವು ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
JRLobo
Photography of JRLobo in office

ಡಿ.17 ರಂದು ಶಕ್ತಿನಗರ ನಾಲ್ಯಪದವು ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಶಕ್ತಿನಗರದ ನಾಲ್ಯಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ 17 ರಂದು ರಕ್ತದಾನ ಶಿಬಿರ ಮತ್ತು ದಂತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರಗೆ ನಡೆಯುವ ಈ ಶಿಬಿರದಲ್ಲಿ ಭಾಗವಹಿಸಬಹುದು.

ಇಂದಿರಾ ಗಾಂಧಿ ಅವರ ಜನ್ಮ ಶತಾಬ್ಧಿ ಪ್ರಯುಕ್ತ 25 ನೇ ಉಚಿತ ವೈದ್ಯಕೀಯ ಶಿಬಿರ ಇದಾಗಿದ್ದು ಕೆ.ಎಂ.ಸಿ ಆಸ್ಪತ್ರೆಯವರ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ರೆಡ್ ಕ್ರಾಸ್ ಬ್ಲಡ್ ಬ್ಯಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರ, ಎ.ಜೆ.ಶೆಟ್ಟಿ ಆಸ್ಪತ್ರೆ ಸಹಭಾಗಿತ್ವದಲ್ಲಿ ದಂತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಆಯುಷ್ ಇಲಾಖೆ, ಆಯುಷ್ ವೈದ್ಯಾಧಿಕಾರಿಗಳ ಸಂಘ, ಆರ್ಶಿ ಆಯುರ್ವೇದಿಕ್ ಸ್ಪೆಶಾಲಿಟಿ ಕ್ಲಿನಿಕ್ ಸಹಯೋಗದಲ್ಲಿ ಆಯುರ್ವೇದ ಹಾಗೂ ಹೋಮಿಯೋಪತಿ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಈ ಶಿಬಿರದಲ್ಲಿ ಮಂಗಳೂರು ಮಹಾನಗರಪಾಲಿಕೆ ಆರೋಗ್ಯ ಇಲಾಖೆ , ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಭಾಗವಹಿಸುತ್ತಾರೆ.

ಈ ಶಿಬಿರದಲ್ಲಿ ಕಣ್ಣು, ಕಿವಿ, ಗಂಟಲು, ಮೂಳೆ, ಸ್ತ್ರೀ ರೋಗ, ಚರ್ಮ ಹಾಗೂ ಇತರ ಸಾಮಾನ್ಯ ಕಾಯಿಲೆಗಳಿಗೆ ಪರೀಕ್ಷೆಯನ್ನು ಮಾಡಲಾಗುತ್ತದೆ.

ಸಾರ್ವಜನಿಕರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಅವರು ವಿನಂತಿಸಿದ್ದಾರೆ.