Home » Website » News from jrlobo's Office » ಲಕ್ಷದ್ವೀಪಕ್ಕೆ ಅ.29-31 ನಿಯೋಗ : ಶಾಸಕ ಜೆ.ಆರ್.ಲೋಬೊ
JRLobo
Photography of JRLobo in office

ಲಕ್ಷದ್ವೀಪಕ್ಕೆ ಅ.29-31 ನಿಯೋಗ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಲಕ್ಷದ್ವೀಪಕ್ಕೆ ಅಕ್ಟೋಬರ್ 29 ರಿಂದ 31 ರವರೆಗೆ ಉನ್ನತಮಟ್ಟದ ನಿಯೋಗ ಕೊಂಡೊಯ್ಯುವುದಾಗಿ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು.

ಅವರು ಮಂಗಳೂರು ಹಳೆಬಂದರು ಅಭಿವೃದ್ಧಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಲಕ್ಷದ್ವೀಪದೊಂದಿಗೆ ಮಾತುಕತೆ ನಡೆಸಿ ವ್ಯಾಪಾರ ವಹಿವಾಟು ಪುನರಾರಂಭ ಮಾಡುವ ನಿಟ್ಟಿನಲ್ಲಿ ಈ ನಿಯೋಗ ಒಯ್ಯುತ್ತಿರುವುದಾಗಿ ತಿಳಿಸಿದರು.

ಲಕ್ಷ ದ್ವೀಪ ಹಿಂದೆ ಸಾಕಷ್ಟು ವಹಿವಾಟು ಮಾಡುತ್ತಿತ್ತು. ಈಗ ಅದು ನಿಲ್ಲಿಸಿದೆ. ಲಕ್ಷ ದ್ವೀಪವನ್ನು ವ್ಯಾಪಾರ ಪುನರಾರಂಭ ಮಾಡುವಂತೆ ಮನವೊಲಿಸಲಾಗುವುದು ಮತ್ತು ಮಂಗಳೂರು ಹಳೆ ಬಂದರಿನಲ್ಲಿ 70 ಕೋಟಿ ರೂಪಾಯಿ ವೆಚ್ಚದಲ್ಲಿ ಜೆಟ್ಟಿ ನಿರ್ಮಿಸಲು ಮನವಿ ಮಾಡಲಾಗುವುದು ಇದು ಸಾಧ್ಯವಾದರೆ ಲಕ್ಷ ದ್ವೀಪಕ್ಕಾಗಿಯೇ ಪ್ರತ್ಯೇಕ ಜೆಟ್ಟಿಯಾಗುತ್ತದೆ. ಈ ಮೊತ್ತವನ್ನು ಲಕ್ಷದ್ವೀಪವೇ ಪಾವತಿಸುವಂತೆ ಮನವಿ ಮಾಡಲಾಗುವುದು ಎಂದರು.

ತಾವೂ ಈಗಾಗಲೇ ಲಕ್ಷ ದ್ವೀಪದ ಸಂಸದರನ್ನು ಸಂಪರ್ಕಿಸಿದ್ದು ಅವರು ಕೂಡಾ ಮಾತುಕತೆಗೆ ಆಸಕ್ತಿ ತೋರಿಸಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು.

ಲಕ್ಷದ್ವೀಪದೊಂದಿಗೆ ಮಾತು ಕತೆ ಫಲಪ್ರದವಾದರೆ ಮಂಗಳೂರು ಬಂದರಿನಲ್ಲಿ ಮತ್ತೆ ವಹಿವಾಟು ವೃದ್ದಿಯಾಗುತ್ತದೆ ಎಂದ ಅವರು ಈಗ ಲಕ್ಷ ದ್ವೀಪ ಕೇರಳಕ್ಕೆ ತನ್ನ ವಹಿವಾಟು ಮುಂದುವರಿಸಿದೆ ಎಂದರು.